ಮಡಿಕೇರಿ, ನ. 23: ಕರ್ನಾಟಕ ಜಾನಪದ ಆಕಾಡೆಮಿ ವತಿಯಿಂದ ವಿವಿಧ ಜಾನಪದ ಕಲಾ ಪ್ರಕಾರಗಳು ಜಾನಪದ ಗಾಯನದ ಬಗ್ಗೆ ತರಬೇತಿ ಪಡೆಯುವಂತಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗ ಶಿಬಿರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶಿಬಿರಾರ್ಥಿಗಳಿಗೆ ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ತರಬೇತಿ ನೀಡಲಾಗುವದು. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಅರ್ಜಿಗಳನ್ನು ಕರ್ನಾಟಕ ಜಾನಪದ ಆಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ ಬೆಂಗಳೂರು ಹಾಗೂ ಜಿಲ್ಲಾ ಸಹಾಯಕ ನಿರ್ದೇಶಕರುಗಳು, ಕಾರ್ಯಾಲಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳಿಂದ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ 080-22215509 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಜಾನಪದ ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.