ಮಡಿಕೇರಿ, ನ. 22: ಕರ್ನಾಟಕ ನ್ಯಾಯಾಂಗ ಅಕಾಡೆಮಿ ಮತ್ತು ಜಿಲ್ಲಾ ನ್ಯಾಯಾಂಗ ಇಲಾಖೆ ವತಿಯಿಂದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಸಹಕಾರದಲ್ಲಿ ನ್ಯಾಯಾಂಗ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಭಿಯೋಜಕರು ಮತ್ತು ಜಿಲ್ಲಾ ನ್ಯಾಯಾಂಗದ ಸಿಬ್ಬಂದಿಗಳಿಗಾಗಿ ‘ವಿದ್ಯುನ್ಮಾನ ಹೇಳಿಕೆ ಕುರಿತು ಕಾನೂನು ಕಾರ್ಯಾಗಾರ ತಾ. 23 ರಂದು (ಇಂದು) ಬೆಳಿಗ್ಗೆ 9.45 ಗಂಟೆಗೆ ಜಿಲ್ಲಾ ಪಂಚಾಯಿತಿ ನೂತನ ಭವನದಲ್ಲಿ ನಡೆಯಲಿದೆ.
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾದ ಎಸ್.ಎನ್. ಸತ್ಯನಾರಾಯಣ, ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶ ಕೆ. ನಟರಾಜನ್, ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ಸಚಿನ್ ಶಂಕರ್ ಮಗದಂ, ಜಿ.ಪಂ. ಸಿಇಒ ಕೆ. ಲಕ್ಷ್ಮಿಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ನಿವೃತ್ತ ಜಿಲ್ಲಾ ನ್ಯಾಯಾಧೀಶ ಸೋಮಶೇಖರ್, ಬೆಂಗಳೂರು ಸೈಬರ್ ಅಪರಾಧದ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಯಶ್ವಂತ್ಕುಮಾರ್, ಬೆಂಗಳೂರು ಜಾರಿ ನಿರ್ದೇಶನಾಲಯದ ವಿಶೇಷ ಸಾರ್ವಜನಿಕ ಪ್ರಾಸಿಕ್ಯೂಟರ್ ಮಧುಕರ್ ದೇಶಪಾಂಡೆ, ಬೆಂಗಳೂರು ಡಾ. ಎಂ.ಎಸ್. ರಾಮಯ್ಯ ಕಾಲೇಜಿನ ತಾಂತ್ರಿಕ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮನಿಶ್ಕುಮಾರ್, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವಿ.ವಿ. ಮಲ್ಲಾಪುರ, ಬೆಂಗಳೂರು ಕರ್ನಾಟಕ ನ್ಯಾಯಾಂಗ ಅಕಾಡೆಮಿ ನಿರ್ದೇಶಕಿ ಪ್ರಭಾವತಿ ಎಂ. ಹಿರೇಮಠ್ ಇತರರು ಪಾಲ್ಗೊಳ್ಳಲಿದ್ದಾರೆ.