ಮಡಿಕೇರಿ, ನ. 23: ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದುಗೊಳಿಸಿದ ಮತ್ತು ಶಾಲಾ ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ಚರಿತ್ರೆಯನ್ನು ಕೈ ಬಿಡಲು ತಯಾರಾಗುತ್ತಿರುವ ರಾಜ್ಯ ಸರಕಾರ ಹಾಗೂ ಶಾಸಕರ ವಿರುದ್ಧ ತಾ. 26 ರಂದು ಬೆಳಿಗ್ಗೆ 10.30 ಗಂಟೆಗೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಗುವದು ಎಂದು ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಟಿ.ಹೆಚ್.ಅಬೂಬಕ್ಕರ್ ತಿಳಿಸಿದ್ದಾರೆ.
ನಗರದ ಇಂದಿರಾಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಲಾಗುವದು ಎಂದು ತಿಳಿಸಿದ್ದಾರೆ.