ಕೂಡಿಗೆ, ನ. 22: ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವತಿಯಿಂದ ತಾ. 26 ರಂದು ಲಕ್ಷದೀಪೋತ್ಸವ ಕಾರ್ಯಕ್ರಮ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಅವರಣದಲ್ಲಿ ನಡೆಯಲಿದೆ.

ಅಂದು ಶ್ರೀ ಸ್ವಾಮಿಗೆ ಬೆಳಗ್ಗೆನಿಂದಲೂ ಅಲಂಕಾರ ವಿಶೇಷ ಪೂಜೆ, ನಂತರ ಸಂಜೆ 8 ಗಂಟೆಗೆ ದೀಪ ಅಲಂಕಾರ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.