ಸೋಮವಾರಪೇಟೆ,ಟಿ.22: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಸೃಷ್ಟಿಯ ಚಿಗುರು ಕವಿ ಬಳಗ ಇವರುಗಳ ವತಿಯಿಂದ ತಾ.24ರಂದು ಪಟ್ಟಣದ ಮಹಿಳಾ ಸಮಾಜದಲ್ಲಿ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಕವಿ ಬಳಗದ ಅಧ್ಯಕ್ಷ ಕೆ.ಪಿ.ಸುದರ್ಶನ್ ತಿಳಿಸಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಶರಣ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಎಸ್.ಮಹೇಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ್, ಜಾನಪದ ಪರಿಷತ್ ಹೋಬಳಿ ಅಧ್ಯಕ್ಷ ಎಸ್.ಎ.ಮುರಳೀಧರ್, ಸಾಹಿತಿಗಳಾದ ಶಿವದೇವಿ ಅವನೀಶ್ಚಂದ್ರ, ಜಲಾಕಾಳಪ್ಪ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಆಟೋ ಚಾಲಕಿ ಪ್ರಮೀಳಾ, ಕ.ರ.ವೇ. ತಾಲೂಕು ಅಧ್ಯಕ್ಷ ಕೆ.ಎನ್.ದೀಪಕ್, ಆಕಾಶವಾಣಿ ಕಲಾವಿದ ಬಿ.ಎ.ಗಣೇಶ್ ಅವರುಗಳನ್ನು ಸನ್ಮಾನಿಸಲಾಗುತ್ತದೆ.