ಕುಶಾಲನಗರ, ನ. 22: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಲು ಆಸಕ್ತಿಯೊಂದಿಗೆ ಸಮರ್ಪಣಾ ಮನೋಭಾವ ಅತ್ಯಗತ್ಯ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ನಾಗರಿಕ ಸೇವಾ ಹಾಗೂ ಬ್ಯಾಂಕಿಂಗ್ ನೇಮಕಾತಿಗೆ ಸಂಬಂಧಿಸಿದಂತೆ ಜರುಗಿದ ಸ್ಪರ್ಧಾತ್ಮಕ ಪರೀಕ್ಷೆಗಳ ಅಭಿಶಿಕ್ಷಣ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರಿಗೆ ಕಲಿಕೆಯ ಬಗ್ಗೆ ಆಸಕ್ತಿ ಇರಬೇಕು ಎಂದರು. ಕಂಡ ಕನಸುಗಳ ಸಾಕಾರ ಮಾಡಲು ಪರಿಶ್ರಮ ಮುಖ್ಯ. ಉತ್ತಮ ಸಾಧನೆ ಮಾಡಲು ಬಯಸುವವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಾಹಿತಿಯನ್ನು ಪಡೆದುಕೊಂಡು ಸೂಕ್ತ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಸಕ್ತಿ ಇರುವ ವಿಷಯಗಳ ಆಯ್ಕೆ ಮಾಡಿಕೊಳ್ಳಬೇಕು. ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ದಿನ ಪತ್ರಿಕೆಗಳಲ್ಲಿ ಪ್ರಮುಖವೆನಿಸುವ ಮಾಹಿತಿಗಳನ್ನು ಸಂಗ್ರಹಿಸುವ ಹಾಗೂ ಪ್ರಚಲಿತ ವಿದ್ಯಮಾನಗಳ ಮಾಹಿತಿಯನ್ನು ಪಡೆದುಕೊಳ್ಳುವ ಮೂಲಕ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಬದುಕಿನಲ್ಲಿ ಶಿಸ್ತು ಇದ್ದರೆ ಗೆಲುವು ನಿಶ್ಚಿತ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪೆÇ್ರ. ಎ.ಎಂ. ಖಾನ್ ಮಾತನಾಡಿ, ಕಾರ್ಯ ಕ್ಷಮತೆ, ಸಮರ್ಪಣಾ ಮನೋಭಾವ, ಸಾಧಿಸುವ ಛಲವೊಂದಿದ್ದರೆ ಸಾಕು. ಮನಸ್ಸು ಮಾಡಿದರೆ ಅಸಾಧ್ಯವಾದುದು ಯಾವದೂ ಇಲ್ಲ ಎಂದು ತಿಳಿಸಿದರು.

ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಪ್ರಭಾರ ನಿರ್ದೇಶಕರಾದ ಪೆÇ್ರ.ಮಂಜುಳಾ ಶಾಂತರಾಮ್, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಉದ್ಯೋಗಾಧಿಕಾರಿ ಸಿ.ಜಗನ್ನಾಥ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‍ನ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ ಹಾಗೂ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಕೋಶದ ಸಂಯೋಜಕ ಡಾ. ಎ.ಎಚ್. ಸ್ನೇಹ ರಾಣಿ ಮಾತನಾಡಿದರು.

ಇದೇ ಸಂದರ್ಭ ಸಹ ಪ್ರಾಧ್ಯಾಪಕ ಡಾ.ಕೆ.ಎಸ್.ಚಂದ್ರಶೇಖರಯ್ಯ, ಸೂಕ್ಷ್ಮಾಣು ಜೀವ ವಿಜ್ಞಾನ ವಿಭಾಗದ ಸಂಯೋಜಕಿ ಡಾ.ಐ.ಕೆ.ಮಂಜುಳಾ, ಸಹಾಯಕ ಪ್ರಾಧ್ಯಾಪಕರುಗಳಾದ ಡಾ.ಚಂದ್ರಶೇಖರ ಜಿ. ಜೋಶಿ, ಡಾ.ಕೆ.ಕೆ.ಧರ್ಮಪ್ಪ, ಡಾ.ಗುಣಶ್ರೀ, ಯೋಗಿಕ್ ಸೈನ್ಸ್ನ ಸಂಯೋಜಕ ಡಾ.ಶಾಮ ಸುಂದರ್, ವಿವಿಧ ವಿಭಾಗದ ಉಪನ್ಯಾಸಕರು, ಬೋಧಕ ವರ್ಗ, ತಾಂತ್ರಿಕ ವರ್ಗ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉಪನ್ಯಾಸಕ ಜûಮೀರ್ ಅಹಮದ್ ನಿರೂಪಿಸಿದರು.