ಮಡಿಕೇರಿ, ನ. 22: ಪ್ರಸಕ್ತ ಸಾಲಿನಲ್ಲಿ ಡಿಸೆಂಬರ್ 3 ರಂದು ನಡೆಯುವ ವಿಶ್ವ ವಿಕಲಚೇತನ ದಿನಾಚರಣೆ ಅಂಗವಾಗಿ ತಾ. 25 ರಂದು ಸೋಮವಾರಪೇಟೆ ತಾಲೂಕಿನಲ್ಲಿ, ತಾ. 26 ರಂದು ವೀರಾಜಪೇಟೆ ತಾಲೂಕಿನಲ್ಲಿ ಹಾಗೂ ತಾ. 27 ರಂದು ಮಡಿಕೇರಿ ತಾಲೂಕಿನಲ್ಲಿ ವಿಶೇಷಚೇತನರಿಗಾಗಿ ವಿವಿಧ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕøತಿಕ ಸ್ಪರ್ದೆ ಏರ್ಪಡಿಸಲಾಗಿದೆ. ನಿಗದಿತ ದಿನಾಂಕಗಳಂದು ಸಂಬಂಧಿಸಿದ ತಾಲೂಕಿನ ವಿಶೇಷಚೇತನರು ಹಾಜರಾಗಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಆರ್. ಸಂಪತ್ ಕುಮಾರ್ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಶಿಶು ಆಭಿವೃದ್ಧಿ ಯೋಜನಾಧಿಕಾರಿಗಳು ಮಡಿಕೇರಿ ದೂ ಸಂಖ್ಯೆ- 9972957358, 9481592645. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೊಮವಾರಪೇಟೆ ದೂ.ಸಂ.08276-282281. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪೊನ್ನಂಪೇಟೆ ದೂ.ಸಂ: 08274-249010 ಇವರುಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್. ಸಂಪತ್ ಕುಮಾರ್ ತಿಳಿಸಿದ್ದಾರೆ.