ಮಡಿಕೇರಿ, ನ. 22: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆಸುವ ಸಣ್ಣ ಕಥೆಗಳ ಗೌರಮ್ಮ ದತ್ತಿ ಕಾರ್ಯಕ್ರಮದ ಅಂಗವಾಗಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ತಾ. 30 ರಂದು “ಸಣ್ಣ ಕಥೆಗಳನ್ನು ಬರೆಯುವ ಸ್ಪರ್ಧೆ”ಯು ಮಡಿಕೇರಿ ಸುದರ್ಶನ ವೃತ್ತದ ಬಳಿಯ ಎಸ್ಜೆಎಸ್ವೈ ಕಟ್ಟಡದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ತಾ. 28 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ನಗದು ಬಹುಮಾನ ನೀಡಲಾಗುವದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್ಸಾಗರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 8277066123, 9742632283ನ್ನು ಸಂಪರ್ಕಿಸಬಹುದು.