ಮಡಿಕೇರಿ, ನ. 22: ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ಸಹ ಪಠ್ಯ ಚಟುವಟಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಸಮಗ್ರ ಶಿಕ್ಷಣ ಅಭಿಯಾನದ ಪ್ರಭಾರ ಉಪಸಮನ್ವ ಯಾಧಿಕಾರಿ ಕಾಶೀನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2019-20ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆ ಸ್ಪರ್ಧೆಯನ್ನು ತಾ.25 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಮಡಿಕೇರಿ ಇಲ್ಲಿ ಪೂರ್ವಾಹ್ನ 10 ಗಂಟೆಗೆ ಆಯೋಜಿಸಲಾಗಿದೆ.