ಮಡಿಕೇರಿ, ನ. 22: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸೇರಿದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2 ವರ್ಷದ ಅವಧಿಯ ಎಇಇ/ಓಇಇಖಿ ತರಬೇತಿಯನ್ನು ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ತಿತಿತಿ.sತಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಅರ್ಜಿ ಪಡೆದು ರಿee.ಟಿeeಣ.ಠಿeಣಛಿ@gmಚಿiಟ.ಛಿom ಇ-ಮೇಲ್ ವಿಳಾಸಕ್ಕೆ ಸಲ್ಲಿಸಬೇಕು.

ಅಲ್ಲದೇ ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡುವ ಸಂಬಂಧ ಎಸ್‍ಎಟಿ, ಜಿಆರ್‍ಇ, ಜಿಎಂಎಟಿ ಮೊದಲಾದ ಅರ್ಹತಾ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ನೀಡಲು ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ವತಿಯಿಂದ ಈಗಾಗಲೇ ಅರ್ಜಿ ಆಹ್ವಾನಿಸಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಎಸ್‍ಎಟಿ ಪರೀಕ್ಷೆಗೆ ಮತ್ತು ಸ್ನಾತಕೋತ್ತರ ಹಾಗೂ ಪಿಹೆಚ್‍ಡಿ ಅಧ್ಯಯನಕ್ಕೆ ಆಸಕ್ತಿಯಿರುವ ಅಭ್ಯರ್ಥಿಗಳು ಜಿಆರ್‍ಇ, ಜಿಎಂಎಟಿ ತರಬೇತಿಗೆ ತಿತಿತಿ.sತಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿ sಚಿಣ.gಡಿe.gmಚಿಣ.ಠಿeಣಛಿ@gmಚಿiಟ.ಛಿom ಇ-ಮೇಲ್ ವಿಳಾಸಕ್ಕೆ ಸಲ್ಲಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.