ಮಡಿಕೇರಿ, ನ. 23: ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖಾ ವತಿಯಿಂದ ನಿರುದ್ಯೋಗ ಯುವಕ, ಯುವತಿಯರು ವಿವಿಧ ತರಬೇತಿ ಗಳಾದ ಲಘು ವಾಹನ ತರಬೇತಿ, ಕಂಪ್ಯೂಟರ್ ತರಬೇತಿ, ಹೊಲಿಗೆ ತರಬೇತಿ, ಬ್ಯೂಟಿಷಿಯನ್ ತರಬೇತಿ, ಸಾರಣಿ ಮತ್ತು ಬಾರ್‍ಬೆಂಡಿಂಗ್ ಮುಂತಾದ ತರಬೇತಿಗಳನ್ನು ಹಮ್ಮಿ ಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡದ ಜೇನುಕುರುಬ, ಯರವ, ಸೋಲಿಗ, ಕುಡಿಯ, ಗೌರಿಗ, ಕುರುಬ ಜನಾಂಗದ ಆಸಕ್ತ ಯುವಕ, ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಕಚೇರಿ ವೇಳೆಯಲ್ಲಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115 ಮತ್ತು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಸಿ.ಶಿವಕುಮಾರ್ ಅವರು ತಿಳಿಸಿದ್ದಾರೆ.