ಮಡಿಕೇರಿ, ನ. 22: ಕೊಡಗು ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜು ಉಪನ್ಯಾಸಕರು ಮತ್ತು ಬೋಧಕೇತರ ನೌಕರರ ಸಂಘ ಸ್ಥಾಪನೆ ಮತ್ತು ಸಮಸ್ಯೆಗಳ ಬಗ್ಗೆ ಸಂಘಟಿತರಾಗಿ ಸಮಾಲೋಚಿಸಿ ಚರ್ಚಿಸಲು, ಸಂಘದ ರೂಪುರೇಷೆಗಳನ್ನು ಸಿದ್ಧಪಡಿಸಲು ತಾ. 23ರಂದು (ಇಂದು) 2.30 ಗಂಟೆಗೆ ಮಡಿಕೇರಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ಸಭೆ ಏರ್ಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಿದ್ದರಾಜು ಬಿ. (9449405609) ಇವರನ್ನು ಸಂಪರ್ಕಿಸಬಹುದಾಗಿದೆ.