ಸೋಮವಾರಪೇಟೆ, ನ. 22: ಸಮೀಪದ ಐಗೂರು ಗ್ರಾಮ ಪಂಚಾಯಿತಿಯ ಬೇಜವಾಬ್ದಾರಿ ಯಿಂದ ಪ್ರತಿನಿತ್ಯ ಸಾವಿರಾರು ಲೀಟರ್ ಕುಡಿಯುವ ನೀರು ಪೋಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದ ಶಾಲೆಯ ಸಮೀಪ ಕುಡಿಯುವ ನೀರಿನ ಪೈಪ್‍ಲೈನ್ ಒಡೆದು ಹೋಗಿದ್ದು,ಪ್ರತಿ ದಿನ ನೀರು ಸಂಗ್ರಹಗೊಂಡು ಕೆರೆಯಂತಾಗಿದೆ. ಜಲಮೂಲ ರಕ್ಷಣೆಯ ಕುರಿತು ಉಪದೇಶ ನೀಡುವ ಜನಪ್ರತಿನಿಧಿಗಳಿಗೆ ಈ ಸಮಸ್ಯೆಯ ಕುರಿತು ಪುಕಾರು ನೀಡಿ ಒಂದು ತಿಂಗಳು ಕಳೆದಿದ್ದರೂ ಇನ್ನೂ ಸರಿಪಡಿಸುವ ಗೋಜಿಗೆ ಹೋಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.