ಮಡಿಕೇರಿ, ನ. 22: ಭಾಗಮಂಡಲ ಹೋಬಳಿಯ ಕರಿಕೆ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಪವಿಭಾಗಾಧಿಕಾರಿ ಜವರೇಗೌಡ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಂಚಣಿ ವ್ಯವಸ್ಥೆ ಕುರಿತು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಡಲಾಯಿತು. ಗ್ರಾ.ಪಂ. ಅಧ್ಯಕ್ಷ ಎನ್. ಬಾಲಚಂದ್ರ ನಾಯರ್ ಅಧ್ಯಕ್ಷತೆ ವಹಿಸಿದ್ದರು. ಸುಮಾರು 148 ಅರ್ಜಿಗಳು ಸಲ್ಲಿಕೆಯಾದವು.
ಪ್ರಮುಖರಾದ ಬಿ.ಎಸ್. ರಮಾನಾಥ್, ಬಾಲಕೃಷ್ಣ, ಪುರುಷೋತ್ತಮ್, ಬಿಪಿನ್, ಆರ್.ಐ. ಸದಾಶಿವ, ವಿ.ಎ. ಪ್ರಕಾಶ್ ಮತ್ತಿತರರು ಹಾಜರಿದ್ದರು.