*ಗೋಣಿಕೊಪ್ಪಲು, ನ. 22: ವೀರಾಜಪೇಟೆ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಜಿ.ಪಂ. ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಚಾಲನೆ ನೀಡಿದರು.
ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ನಿಯಮಿತ ಇದರ ಆಯೋಜನೆಯಲ್ಲಿ ನಾಲ್ಕು ದಿನಗಳ ಪ್ರವಾಸಕ್ಕೆ ತಾಲೂಕಿನ 17 ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಸಾಮಾನ್ಯ ವರ್ಗದ 177 ವಿದ್ಯಾರ್ಥಿಗಳು ತೆರಳಿದ್ದಾರೆ.
ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬೆಳಗಿ ಅವರು ಪ್ರವಾಸ ತೆರಳುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಪ್ರವಾಸದ ಕುರಿತು ಮಾಹಿತಿ ನೀಡಿದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಅನುದಾನಿತ ಪ್ರೌಢಶಾಲಾ ಸಂಘದ ಅಧ್ಯಕ್ಷ ರೋಹಿತ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಬಿ.ಪಿ. ಉತ್ತಪ್ಪ, ಪ್ರವಾಸೋದ್ಯಮ ನಿಗಮ ನಿಯಮಿತ ನಿರ್ದೇಶಕ ರುಕ್ಮಾಂಗದ, ಪ್ರವಾಸದ ನೋಡಲ್ ಅಧಿಕಾರಿ ಟಿ.ಪಿ. ಸುರೇಶ್, ಸಿ.ಆರ್.ಪಿ. ತಿರುನೆಲ್ಲಿಮಾಡ ಜೀವನ್, ಇ.ಸಿ.ಓ ಸತೀಶ್, ಶಿಕ್ಷಕರುಗಳಾದ ಜಾಜಿ, ಹರಿಣಿ, ರೀನಾ, ರೋಸಿ, ರಮೇಶ್ ಹಾಜರಿದ್ದರು.