ಮಡಿಕೇರಿ, ನ. 23: ಭಾರತೀಯ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ತಾ. 25 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬಿಇಎಲ್ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ ಎಂ.ವಿ, ಸಿಎಸ್‍ಆರ್ ಸಮಿತಿಯ ಅಧ್ಯಕ್ಷರು ಮತ್ತು ನಿರ್ದೇಶಕ ಶಿವಕುಮಾರ್ ಕೆ.ಎಂ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಇತರರು ಪಾಲ್ಗೊಳ್ಳಲಿದ್ದಾರೆ.