ಸುಂಟಿಕೊಪ್ಪ, ನ. 22 : ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿನಿ ಹಾಗೂ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಸಮೀಪದ ಕೊಡಗರಹಳ್ಳಿ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರಿ ಪೂಜಾ (19) ಕುಶಾಲನಗರ ಕಾಲೇಜೊಂದರ ವಿದ್ಯಾರ್ಥಿನಿ ಯಾಗಿದ್ದು, ಪೋಷಕರು ಮೊಬೈಲ್ ಕಿತ್ತುಕೊಂಡರು ಎಂಬ ಕಾರಣಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾಳೆ.
ಮತ್ತೊಂದು ಪ್ರಕರಣದಲ್ಲಿ ಸಮೀಪದ ಕೆದಕಲ್ ಗ್ರಾಮದ 7ನೇ ಮೈಲು ನಿವಾಸಿ ಫೆಲಿಕ್ಸ್ ಡಿಸೋಜ ಅವರ ಪತ್ನಿ ಸುನಿತಾ ಡಿಸೋಜ (25) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.
ಈ ಎರಡು ಪ್ರಕರಣ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.