ಸೋಮವಾರಪೇಟೆ,ನ.22: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ತಾ.25ರಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಯೋಜನಾಧಿಕಾರಿ ವೈ.ಪ್ರಕಾಶ್ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ಜಿಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಉದ್ಘಾಟಿಸಲಿದ್ದಾರೆ. ತಾಪಂ ಅಧ್ಯಕ್ಷೆ ಪುಷ್ಪ ರಾಜೇಶ್, ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್, ಯೋಜನೆಯ ನಿರ್ದೇಶಕ ಡಾ.ಯೋಗೇಶ್, ಠಾಣಾಧಿಕಾರಿ ಶಿವಶಂಕರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಸ್.ಮಹೇಶ್, ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕ ಜಯಕುಮಾರ್ ಭಾಗವಹಿಸಲಿದ್ದಾರೆ.