ಮೂರ್ನಾಡು, ನ. 22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೂರ್ನಾಡು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಕೆ.ಎಂ. ಫಾತಿಮ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಮತ್ತು ಪಿ.ಪಿ. ಶ್ರೀರಕ್ಷ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿಕ್ಕಮಗಳೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ ಮತ್ತು ಕನ್ನಡ ಉಪನ್ಯಾಸಕಿ ಸಿ.ಪಿ. ಕಾವೇರಮ್ಮ ಚಿತ್ರದಲ್ಲಿದ್ದಾರೆ.