ಮಡಿಕೇರಿ, ನ. 23: ಪ್ರಸಕ್ತ (2019-20) ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಹ ಪಠ್ಯ ಚಟುವಟಿಕೆ ಸ್ಪರ್ಧೆಯು ತಾ. 25 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಮೂರು ತಾಲೂಕಿನ ಸಹ ಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರು ಭಾಗವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್. ಮಚ್ಚಾಡೋ ತಿಳಿಸಿದ್ದಾರೆ.