ಕೂಡಿಗೆ: ಮಂಗಳೂರಿನಲ್ಲಿ ಆರಂಭಗೊಂಡ ಕೆನರಾ ಬ್ಯಾಂಕ್ನ ಸಂಸ್ಥಾಪಕ ಮುಲ್ಕಿಯ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಜನ್ಮದಿನಾಚರಣೆಯನ್ನು ಹೆಬ್ಬಾಲೆ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಕೆನರಾ ಬ್ಯಾಂಕ್ ಇಂದು ಬೃಹತ್ ಪ್ರಮಾಣದಲ್ಲಿ ಬೆಳೆದಿದ್ದು ಹೆಮ್ಮೆಯ ವಿಷಯವಾಗಿದೆ ಎಂದು ಹೆಬ್ಬಾಲೆ ಕೆನರಾ ಬ್ಯಾಂಕಿನ ವ್ಯವಸ್ಥಾಪಕ ರಾಜಕುಮಾರ್ ಮಾಹಿತಿ ನೀಡಿದರು.
ಬ್ಯಾಂಕ್ ಅಧಿಕಾರಿ ಅಲೋಕ್ ಮಾತನಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಭಾಷಾ ಅಧ್ಯಾಪಕ ವೆಂಕಟನಾಯಕ್, ಶಾಲೆಯಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ಬಾಲಕಿಯರಿಗೆ ಬಹುಮಾನ ನೀಡಿದರು. ಸುಬ್ಬರಾವ್ ಪೈ ಅವರ ಜನ್ಮದಿನಾಚರಣೆಯ ಅಂಗವಾಗಿ ಪ್ರತಿಭಾವಂತ ಮೂರು ಮಂದಿ ಹೆಣ್ಣು ಮಕ್ಕಳಿಗೆ ತಲಾ ರೂ. 5000 ನಗದು ಬಹುಮಾನ ವಿತರಿಸಲಾಯಿತು. ಶಾಲೆಯಲ್ಲಿ ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ 8ನೇ ತರಗತಿ ವಿದ್ಯಾರ್ಥಿ ಮಮತಾ, 9ನೇ ತರಗತಿ ವಿದ್ಯಾರ್ಥಿ ಸುಮಾ ಅವರಿಗೆ ಬಹುಮಾನ ವಿತರಿಸಿದರು.
ಅಧ್ಯಕ್ಷತೆ ವಹಿಸಿದ್ದ ಹೆಬ್ಬಾಲೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್.ಎಲ್. ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆಯಬೇಕು. ಆ ಮೂಲಕ ಶೈಕ್ಷಣಿಕ ಪ್ರಗತಿಯನ್ನು ಕಾಣಬೇಕು ಎಂದರು. ಸಂಸ್ಥೆಯ ಕಾರ್ಯದರ್ಶಿ ನಾಗೇಂದ್ರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲೆಯ ಮುಖ್ಯ ಶಿಕ್ಷಕ ಹೆಚ್.ಎಸ್. ಗಣೇಶ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಸ್ಪರ್ಧೆಯಲ್ಲಿ ಭಾಗವಹಿಸಬೇಕು ಆ ಮೂಲಕ ವಿದ್ಯೆಯಲ್ಲಿ ಪ್ರಗತಿ ಸಾಧಿಸಬೇಕು ಎಂದರು. ದೈಹಿಕ ಶಿಕ್ಷಣ ಶಿಕ್ಷಕ ಭೋಜೆಗೌಡ ಸ್ವಾಗತಿಸಿ, ಶಿಕ್ಷಕ ಸಿ.ಡಿ. ಲೋಕೇಶ್ ವಂದಿಸಿದರು.ವೀರಾಜಪೇಟೆ: ಕೆನರಾ ಬ್ಯಾಂಕ್ನ ಸಂಸ್ಥಾಪನಾ ದಿನಾಚರಣೆಯನ್ನು ವೀರಾಜಪೇಟೆ ಶಾಖಾ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು. ನಿವೃತ್ತ ಬ್ಯಾಂಕ್ ಅಧಿಕಾರಿ ಥೋಮಸ್ ಡಿಸಿಲ್ವಾ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ದಿನಾಚರಣೆ ಅಂಗವಾಗಿ ವೀರಾಜಪೇಟೆಗೆ ಸಮೀಪದ ದೇವಣಗೇರಿ ಗ್ರಾಮದ ಪ್ರೌಢsÀಶಾಲೆಯ ಆರು ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭೆ ಆಧಾರಿತ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಶಾಖಾ ವ್ಯವಸ್ಥಾಪಕಿ ಹಿಮಾ ಜಿ. ಮೋಹನ್, ದೇವಣಗೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕೇಶ್ ಅತಿಥಿಗಳಾಗಿದ್ದರು. ಶಾಖೆಯ ಹಿರಿಯ ಸಿಬ್ಬಂದಿ ಕಾರ್ಯಕ್ರಮವನ್ನು ನಿರೂಪಿಸಿದರು.
 
						