ಮಡಿಕೇರಿ, ನ. 24: ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಅಕ್ಟೋಬರ್ ಅಂತ್ಯಕ್ಕೆ ನಿವೃತ್ತಗೊಂಡ ಹೆಚ್.ಎಸ್. ಬಾಬು ಅವರಿಗೆ ಇತ್ತೀಚೆಗೆ ಜಿಲ್ಲಾ ಪಂಚಾಯಿತಿ ಕಚೇರಿ ವತಿಯಿಂದ ಸನ್ಮಾನಿಸಲಾಯಿತು.
ಜಿ.ಪಂ.ನ ನೂತನ ಭವನದಲ್ಲಿ ನಡೆದ ಸಮಾರಂಭದಲ್ಲಿ ಜಿ.ಪಂ. ಅಧಿಕಾರಿಗಳು ಮತ್ತು ನೌಕರ ವರ್ಗವು ಹೆಚ್.ಎಸ್. ಬಾಬು ಅವರನ್ನು ಸನ್ಮಾನಿಸಿ, ಗೌರವಿಸಿದರು.
ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ಸರ್ಕಾರಿ ಸೇವೆಯು ಜನರ ಸೇವೆಯಾಗಿದೆ. ಸೇವೆಯಲ್ಲಿದ್ದಾಗ ಉತ್ತಮ ಕಾರ್ಯ ಮಾಡಿದಾಗ ನಿವೃತ್ತಿ ನಂತರ ತೃಪ್ತಿ ಸಿಗುತ್ತದೆ ಎಂದರು. ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ್ ಮಾತನಾಡಿ, ಬಾಬು ಅವರು ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿ 37 ವರ್ಷಗಳ ಕಾಲ ವಿವಿಧ ಹಂತಗಳಲ್ಲಿ ಉತ್ತಮ ಕೆಲಸ ನಿರ್ವಹಿಸಿರುವದು ಶ್ಲಾಘನೀಯ ಎಂದರು.
ಸನ್ಮಾನ ಸ್ವೀಕರಿಸಿದ ಬಾಬು ಮಾತನಾಡಿದರು. ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀಕಂಠಮೂರ್ತಿ, ಜಿ.ಪಂ. ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ರೇವಣ್ಣ, ತಾ.ಪಂ. ಇಒಗಳಾದ ಲಕ್ಷ್ಮಿ, ಸುನಿಲ್, ಷಣ್ಮುಗ ಇತರರು ಇದ್ದರು.