ಮಡಿಕೇರಿ, ನ. 24: ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖಾ ವತಿಯಿಂದ ಅಲೆಮಾರಿ, ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತರಿಗೆ ಹೈನುಗಾರಿಕೆ, ಎಮ್ಮೆ ಘಟಕ, ಕುರಿ, ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಮೊಲ ಹಾಗೂ ಹಂದಿ ಸಾಕಾಣಿಕೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಈಗಾಗಲೇ ಹಲವಾರು ಬಾರಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದ್ದರೂ ನಿಗದಿಪಡಿಸಿದ ಗುರಿಗನುಗುಣವಾಗಿ ಅರ್ಜಿ ಸ್ವೀಕೃತಗೊಂಡಿರುವುದಿಲ್ಲ. ಆದ್ದರಿಂದ ಆಸಕ್ತರು ಅರ್ಜಿ ಸಲ್ಲಿಸುವಂತೆ ಕೋರಿದೆ.
ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಪೊನ್ನಂಪೇಟೆ 08274-261261, ಸೋಮವಾರಪೇಟೆ 08276-281115 ಮತ್ತು ಮಡಿಕೇರಿ 08272-223552 ಇಲ್ಲಿ ಪಡೆದು ತಾ. 30 ರೊಳಗೆ ಸಲ್ಲಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ
ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
Ssಠಿ.ಠಿosಣmeಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಬೇಕು. ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ಅದರಲ್ಲಿರುವಂತೆ ಹೆಸರು ನಮೂದಿಸಬೇಕು. ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. (ಆದಾಯ ಮಿತಿ ರೂ. 2.50 ಲಕ್ಷ ಒಳಗಿರಬೇಕು). ಅರ್ಜಿ ಸಲ್ಲಿಸಲು ತಾ. 30 ಕೊನೆಯ ದಿನವಾಗಿದೆ.
ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನ್ನು ನೋಡಬಹುದಾಗಿದೆ. 08272-225531, 08272-223552, 08276-281115, 08274-249476 ನ್ನು ಸಂಪರ್ಕಿಸಬಹುದು.
ಅಪ್ರೆಂಟಿಷಿಪ್ ತರಬೇತಿಗೆ
ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ/ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನವಾಗಿದೆ. ಅರ್ಹರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಸ್ಟುವರ್ಟ್ ಹಿಲ್ಸ್ ರಸ್ತೆ, ಮಡಿಕೇರಿ, ದೂ.ಸಂ : 08272-228449 ಸಂಪರ್ಕಿಸಬಹುದು.
ಅಪ್ರೆಂಟಿಷಿಪ್ ತರಬೇತಿಗೆ
ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮ ಅಪ್ರೆಂಟಿಷಿಪ್ ತರಬೇತಿಯು ಹತ್ತು ತಿಂಗಳ ಅವಧಿಯದ್ದಾಗಿದೆ. ಅಭ್ಯರ್ಥಿಗಳಿಗೆ ಗಣಕ ಜ್ಞಾನ, ಅದರಲ್ಲೂ ಕನ್ನಡ ಭಾಷೆಯಲ್ಲಿನ ಗಣಕ ಜ್ಞಾನ, ಕಡ್ಡಾಯ. ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿರುವ ಇಬ್ಬರು ಅಭ್ಯರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮೂಲಕ ಪ್ರತಿ ತಿಂಗಳಿಗೆ ತಲಾ 15 ಸಾವಿರ ರೂ. ಶಿಷ್ಯವೇತನ ಪಾವತಿಸಲಾಗುವುದು.
ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ/ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್, 2 ಕೊನೆಯ ದಿನವಾಗಿದೆ. ಅರ್ಹರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ, ವಾರ್ತಾ ಭವನ, ಸ್ಟುವರ್ಟ್ ಹಿಲ್ಸ್ ರಸ್ತೆ ದೂ.ಸಂ : 08272-228449 ನ್ನು ಸಂಪರ್ಕಿಸಬಹುದು.