ಮಡಿಕೇರಿ, ನ. 24: ಪ್ರಸಕ್ತ ಸಾಲಿನಿಂದ ಕರ್ನಾಟಕ ಸರ್ಕಾರದ ಇ-ಆಡಳಿತ ಇಲಾಖೆಯವರು ಅಭಿವೃದ್ಧಿಪಡಿಸಿರುವ ಮೆಟ್ರಿಕ್ ನಂತರದ ರಾಜ್ಯ ವಿದ್ಯಾರ್ಥಿವೇತನ ಪೋರ್ಟ್‍ಲ್‍ನ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು ಪರಿಶಿಷ್ಟ ವರ್ಗದ ಅರ್ಹ ವಿದ್ಯಾರ್ಥಿಗಳು ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ತಾ. 30 ರವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕಳೆದ ವರ್ಷ ವಿದ್ಯಾರ್ಥಿ ವೇತನವನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳು ಸಹ ಪ್ರಸ್ತುತ ಸಾಲಿನಲ್ಲಿ ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಯಾವ ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸದೇ ಕಾಲೇಜಿಗೆ ಸೇರಿರುತ್ತಾರೋ ಅಂತಹ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಕಾಲೇಜುಗಳಿಂದ ನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಪತ್ರಗಳನ್ನು ಕಾಲೇಜಿನ ಪ್ರಾಂಶುಪಾಲರು ನೀಡಬೇಕು. ಈ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 08272-229552, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115 ನ್ನು ಸಂಪರ್ಕಿಸಬಹುದು.