ಸಿದ್ದಾಪುರ, ನ. 24: ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಶ್ರೀ ಕೃಷ್ಣ ವಿದ್ಯಾ ಮಂದಿರದ ಆಶ್ರಯದಲ್ಲಿ ಚಿಕೂನ್ ಗೂನ್ಯ, ಮಲೇರಿಯ ಹಾಗೂ ಡೆಂಗ್ಯೂ ತಡೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಶ್ರೀ ಕೃಷ್ಣ ವಿದ್ಯಾಮಂದಿರದ ವಿದ್ಯಾರ್ಥಿಗಳು ಸಿದ್ದಾಪುರ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಸಿದರು. ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ವೈದ್ಯಾಧಿಕಾರಿ ರಾಘವೇಂದ್ರ ಮಾತನಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಸಾರ್ವಜನಿಕರು ನಿಗಾವಹಿಸಬೇಕು. ತಮ್ಮ ಪರಿಸರವನ್ನು ಶುಚಿಯಾಗಿಡಬೇಕು ಎಂದರು. ಈ ಸಂದರ್ಭ ಗ್ರಾ.ಪಂ. ಸದಸ್ಯೆ ದೇವಜಾನು, ಆರೋಗ್ಯ ಇಲಾಖೆಯ ಸುದರ್ಶನ್, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಹಾಜರಿದ್ದರು.