ಸೋಮವಾರಪೇಟೆ, ನ. 24: ಚೈಲ್ಡ್ ಲೈನ್ ಸೇ ದೋಸ್ತಿ ಕಾರ್ಯಕ್ರಮದ ಅಂಗವಾಗಿ ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಸಮೀಪದ ಆಲೂರು-ಸಿದ್ದಾಪುರ ಮೊರಾರ್ಜಿ ವಸತಿ ಶಾಲೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯ ನೆರವೇರಿಸಿ, ವಿವಿಧ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಠಾಣಾಧಿಕಾರಿ ಕೃಷ್ಣನಾಯಕ್, ಎಎಸ್‍ಐ ಗೋವಿಂದರಾಜು, ಸಿಬ್ಬಂದಿ ಪೂರ್ಣಿಮ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ, ವಿಜಯ ಯುವಕ ಸಂಘದ ಅಧ್ಯಕ್ಷ ಪ್ರದೀಪ್, ಸಲಹೆಗಾರ ಜಯಕುಮಾರ್, ಕಾರ್ಯದರ್ಶಿ ತೀರ್ಥ, ಶಾಲಾ ಮುಖ್ಯ ಶಿಕ್ಷಕಿ ಭಾರತಿ, ಚೈಲ್ಡ್‍ಲೈನ್ ಸಂಸ್ಥೆಯ ಸಂಯೋಜಕರಾದ ನವೀನ್, ಯೋಗೇಶ್, ಪ್ರವೀಣ್, ಕುಮಾರಿ, ಮಂಜುಳ, ಶೋಭಾಲಕ್ಷ್ಮಿ, ಅನುಷ ಸೇರಿದಂತೆ ಇತರರು ಭಾಗವಹಿಸಿದ್ದರು.