ವೀರಾಜಪೇಟೆ, ನ. 24: ಗ್ರಾಮಾಭಿವೃದ್ದಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಸಾಧÀ್ಯವಾಗಿದೆ ಎಂದು ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯ ಎಂ.ಎಂ. ಪರಮೇಶ್ವರ ಅಭಿಪ್ರಾಯಪಟ್ಟರು.
ತಾಲೂಕಿನ ಕೊಟ್ಟೋಳಿ ಗ್ರಾಮದ ದಿವ್ಯಜ್ಯೋತಿ ಜ್ಞಾನ ವಿಕಾಸ ಕೇಂದ್ರದಲ್ಲಿ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ಜ್ಞಾನಾರ್ಜನೆಯಲ್ಲಿ ಪುಸ್ತಕಗಳ ಮಹತ್ವ ಎಂಬ ವಿಚಾರಗೋಷ್ಟಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರದಾದ್ಯಂತ ಗ್ರಾಮಾಭಿವೃದ್ಧಿ ಯೋಜನೆಗೆ ಮಾನ್ಯತೆ ಸಿಕ್ಕಿದೆ. ಪ್ರತಿಯೊಬ್ಬ ಮಹಿಳೆಯರು ಒಂದಿಲ್ಲೊಂದು ಸ್ವ ಉದ್ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸುವತ್ತ ಗಮನಹರಿಸಬೇಕು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿ ಅಂಗನವಾಡಿ ಕಾರ್ಯಕರ್ತೆ ಕೆ.ಎಂ. ಉಷಾಕುಮಾರಿ ಜ್ಞಾನಾರ್ಜನೆಯಲ್ಲಿ ಪುಸ್ತಕಗಳ ಮಹತ್ವ ಕುರಿತು ಮಾತನಾಡಿ, ಹೆಚ್ಚೆಚ್ಚು ಪುಸ್ತಕಗಳನ್ನು ದಿನಪತ್ರಿಕೆಗಳನ್ನು ಓದುವದರಿಂದ ನೆನಪಿನ ಶಕ್ತಿ, ಮಾತಿನಲ್ಲಿ ನಿರರ್ಗಳತೆ, ಜ್ಞಾನ ಸಂಪಾದನೆ ಹೆಚ್ಚಾಗುತ್ತದೆ ಎಂದರು.
ಮುಖ್ಯ ಅತಿಥಿ ವನಿತ ಮಾತನಾಡಿ ಮಹಿಳೆಯರಿಗೆ ಸರಕಾರದಿಂದ ದೊರಕುವ ವಿಶೇಷ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಜಯಂತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಸಮವಸ್ತ್ರ ವಿತರಿಸಿದರು.
 
						