ಮಡಿಕೇರಿ, ನ. 26: ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ ಸಂಯುಕ್ತ ಆಶ್ರಯದಲ್ಲಿ ತಾ. 27 ರಂದು (ಇಂದು) ಮಡಿಕೇರಿ ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟ ನಗರದ ಗಾಂಧಿ ಮೈದಾನದಲ್ಲಿ ಈ ಕ್ರೀಡಾಕೂಟ ಜರುಗಲಿದೆ.