ಮಡಿಕೇರಿ, ನ. 25: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2019-20ನೇ ಸಾಲಿಗೆ ಸರ್ಕಾರಿ ಶಾಲೆಯ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ದರ್ಶನ ಪ್ರವಾಸ ಆಯೋಜಿಸಲಾಗಿದೆ. ತಾ. 23ರಿಂದ 26ರವರೆಗೆ ನಾಲ್ಕು ದಿನಗಳ ಕಾಲ ಮಡಿಕೇರಿ ತಾಲೂಕಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಈ ಪ್ರವಾಸಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ ಚಾಲನೆ ನೀಡಿದರು. 8 ಮಂದಿ ಶಿಕ್ಷಕರು ತಾಲೂಕಿನ ಒಟ್ಟು 176 ವಿದ್ಯಾರ್ಥಿಗಳೊಡನೆ ಪ್ರವಾಸಕ್ಕೆ ತೆರಳಿದ್ದಾರೆ.