ಸೋಮವಾರಪೇಟೆ, ನ. 25: ಮಡಿಕೇರಿ ನೆಹರು ಯುವಕೇಂದ್ರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ, ಕಾವೇರಿ ಮಾತಾ ಮಹಿಳಾ ಒಕ್ಕೂಟ ಹಾಗೂ ತೋಳೂರುಶೆಟ್ಟಳ್ಳಿ ಯುವತಿ ಮಂಡಳಿ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ತಾ. 27 ರಂದು ಬೆಳಿಗ್ಗೆ 9 ಗಂಟೆಗೆ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇನಕನಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ತಾಲೂಕು ಯುವ ಒಕ್ಕೂಟದ ಅಧ್ಯಕ್ಷೆ ಚಂದ್ರಿಕಾ ತಿಳಿಸಿದ್ದಾರೆ. ಪುರುಷರಿಗೆ ವಾಲಿಬಾಲ್, ಹಗ್ಗ ಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್, ಸಂಗೀತ ಕುರ್ಚಿ, ಶಾಲಾ ವಿದ್ಯಾರ್ಥಿಗಳಿಗೆ ನೂರು ಮೀಟರ್ ಓಟ ಮತ್ತು ನಿಂಬೆ ಹಣ್ಣು ಓಟ. ಅಂಗನವಾಡಿ ಮಕ್ಕಳಿಗೆ ಕಾಳು ಹೆಕ್ಕುವದು ಮತ್ತು ಕಪ್ಪೆ ಕುಪ್ಪಳಿಸುವ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 8762774626 ಸಂಪರ್ಕಿಸಲು ಕೋರಿದ್ದಾರೆ.