ಚೆಟ್ಟಳ್ಳಿ, ನ. 26: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್ಎಸ್ ಚೆಟ್ಟಳ್ಳಿಯಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ರಂಗಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೆರವೇರಿಸಿದರು.
ತಾಲೂಕು ಪಂಚಾಯಿತಿ ಅನುದಾನದಲ್ಲಿ ರೂ. 3,60,000 ಅನುದಾನದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್ಎಸ್ ಚೆಟ್ಟಳ್ಳಿಯಲ್ಲಿ ರಂಗಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೆರವೇರಿಸಿ ಮಕ್ಕಳು ಪಾಠ ಪ್ರವಚನ ಜೊತೆ ಸಾಂಸ್ಕøತಿಕ ಕಾರ್ಯಕ್ರಮಗಳು ಕೂಡ ನಡೆಸಲು ರಂಗಮಂದಿರ ಪ್ರಯೋಜನಕಾರಿಯಾಗಲಿದ್ದು, ಅದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಮೇರಿ ಅಂಬುದಾಸ್, ಸ್ಥಳೀಯ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಮಾಯಾಕೃಷ್ಣ ಗುತಿಗೆದಾರ ಅಂಬುದಾಸ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.