ಮಡಿಕೇರಿ, ನ. 26: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕಲ್ಯಾಣ ನಿಧಿ ಮತ್ತು ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2019-20ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಹ ಪಠ್ಯ ಚಟುವಟಿಕೆ ಸ್ಪರ್ಧೆಯು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಣಾಧಿಕಾರಿ ಕಾಶಿನಾಥ್, ವಿಷಯ ಪರಿವೀಕ್ಷಕರಾದ ಬಿಂದು, ಪ್ರಮುಖರಾದ ರತ್ನಾಕರ್, ವೆಂಕಟೇಶ್, ರಂಜಿತ್ ಮತ್ತಿತರರು ಪಾಲ್ಗೊಂಡಿದ್ದರು. ಸಹ ಶಿಕ್ಷಕಿ ಮಾಲದೇವಿ ಪ್ರಾರ್ಥಿಸಿದರು. ರಂಜಿತ್ ಸ್ವಾಗತಿಸಿ, ವಂದಿಸಿದರು.