ಕೂಡಿಗೆ, ನ. 25: ಕುಶಾಲನಗರ ಹೋಬಳಿ ವ್ಯಾಪ್ತಿಯ ತೊರೆನೂರು ಗ್ರಾಮ ಸಮೀಪದಲ್ಲಿ ಹರಿಯುವ ಕಾವೇರಿ ನದಿಗೆ ಅಡ್ಡಲಾಗಿ ಶಾಶ್ವತ ಸೇತುವೆ ನಿರ್ಮಾಣ ಮಾಡಲು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈಗಾಗಲೇ ಹೆಬ್ಬಾಲೆಯಲ್ಲಿ ಶಾಶ್ವತ ಸೇತುವೆ ಹಾಗೂ ಕಣಿವೆಯಲ್ಲಿ ತೂಗು ಸೇತುವೆಯನ್ನು ಕಲ್ಪಿಸಲಾಗಿದೆ. ಅದೇ ರೀತಿಯಲ್ಲಿ ತೊರೆನೂರು ಗ್ರಾಮದ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿಕೊಡಬೇಕು ಎಂದು ಗ್ರಾಮಸ್ಥರು ಕಳೆದ ಐದು ವರ್ಷಗಳಿಂದ ಕ್ಷೇತ್ರದ ಶಾಸಕರಿಗೆ ಹಾಗೂ ಜನಪ್ರತಿನಿಧಿಗಳಿಗೆ ಒತ್ತಾಯ ಮಾಡುತ್ತಿದ್ದಾರೆ. ಈ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸP ಎಂ.ಪಿ. ಅಪ್ಪಚ್ಚುರಂಜನ್ ಶಾಶ್ವತ ಸೇತುವೆ ನಿರ್ಮಾಣ ಮಾಡಲು ಕ್ರಮಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.