ನಾಪೋಕ್ಲು, ನ. 26: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವೀರಾಜಪೇಟೆ ಹಾಗೂ ಮಡಿಕೇರಿ ವತಿಯಿಂದ, ಹೊದ್ದೂರಿನಲ್ಲಿ ಅಣಬೆ ಬೇಸಾಯ ಕೃಷಿ ತರಬೇತಿ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಅಧ್ಯಕ್ಷ ಸದಾಶಿವ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಲಯ ಮೇಲ್ವಿಚಾರಕಿ ಜಯಶ್ರೀ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೃಷಿ ಮೇಲ್ವಿಚಾರಕ ಚೇತನ್ ಅಣಬೆ ಬೇಸಾಯ, ತರಕಾರಿ ಹಾಗೂ ಇತರ ಸ್ವಉದ್ಯೋಗ ಅವಕಾಶಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಸೇವಾ ಪ್ರತಿನಿಧಿ ಕಾವೇರಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
 
						