ಮಡಿಕೇರಿ, ನ. 25: ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಸ್ಥಾನೀಯ ಸಮಿತಿ ಸೋಮವಾರಪೇಟೆಯ ವಾರ್ಷಿಕ ಮಹಾಸಭೆ ತಾ. 26 ರಂದು (ಇಂದು) ಸೋಮವಾರ ಪೇಟೆಯ ಮಾನಸ ಹಾಲ್‍ನಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.

ಸಭೆಯ ಅಧ್ಯಕ್ಷತೆಯನ್ನು ಸೋಮವಾರಪೇಟೆ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಎಸ್. ಮನುಕುಮಾರ್ ರೈ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಎಂ.ಬಿ. ದೇವಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಅಂಬೇಕಲ್ ನವೀನ್ ಉಪಸ್ಥಿತರಿರುವರು. ಶಕ್ತಿ ದಿನಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಮುಖ್ಯ ಭಾಷಣ ಮಾಡಲಿದ್ದಾರೆ. ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ನಾಗೇಂದ್ರ ಪ್ರಸಾದ್, ನಿರ್ದೇಶಕ ಎ.ಪಿ. ವೀರರಾಜ್ ಹಾಗೂ ಸಂಘಟನಾ ಕಾರ್ಯದರ್ಶಿ ಬಿ.ಆರ್. ಪ್ರಮೋದ್ ಉಪಸ್ಥಿತರಿರು ವರು ಎಂದು ಸಂಘದ ಪ್ರಕಟಣೆ ತಿಳಿಸಿದೆ.