ಗೋಣಿಕೊಪ್ಪ ವರದಿ, ನ. 26: ಹಳ್ಳಿಗಟ್ಟು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿಗಳಿಗೆ ಇಮೇಜ್ ಪ್ರಾಸಸಿಂಗ್ ಯೂಸಿಂಗ್ ಮ್ಯಾಟ್ ಲ್ಯಾಬ್ ಎಂಬ ವಿಷಯದ ಬಗ್ಗೆ ಮೂರು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಕೊಡವ ಎಜುಕೇಷನ್ ಸೊಸೈಟಿ ಅಧ್ಯಕ್ಷ ಸಿ.ಪಿ. ಬೆಳ್ಳಿಯಪ್ಪ ಉದ್ಘಾಟಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥ ದಿವಾಕರ್ ಮಾತನಾಡಿ, ವಿದ್ಯಾರ್ಥಿಗಳಿಗೆ ತಮ್ಮ ಜೀವನ ರೂಪಿಸಿಕೊಳ್ಳಲು ಕಾರ್ಯಾಗಾರಗಳು ಹೆಚ್ಚು ಸಹಕಾರಿಯಾಗಲಿದೆ ಎಂದು ಹೇಳಿದರು.

ಬೆಂಗಳೂರು ಐ.ಐ.ಎಸ್.ಸಿ. ನಿರ್ದೇಶಕ ಡಾ. ಅಶೋಕ್ ಮಾಹಿತಿ ನೀಡಿದರು. ಪ್ರಾಂಶುಪಾಲೆ ಡಾ. ಪಿ.ಸಿ ಕವಿತ ಹಾಜರಿದ್ದರು.