ಮಡಿಕೇರಿ, ನ. 26: ಜಾತಿ, ಮತ, ಧರ್ಮ ಭೇದ ಮರೆತು ಎಲ್ಲರನ್ನು ಒಟ್ಟಾಗಿ ಕೊಂಡೊಯ್ಯುವದರೊಂದಿಗೆ ಸಾಮರಸ್ಯದ ವಾತಾವರಣವನ್ನು ಸೃಷ್ಟಿಸುವ ಮೂಲಕ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಕ್ಕೆ ಶಕ್ತಿ ತುಂಬಬೇಕೆಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ. ಶಾಹಿದ್ ತೆಕ್ಕಿಲ್ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಎಂ.ಎ. ಉಸ್ಮಾನ್, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷದ ಬಲವನ್ನು ಹೆಚ್ಚಿಸಲು ಅಲ್ಪಸಂಖ್ಯಾತರ ಘಟಕದ ಮೂಲಕ ಶ್ರಮ ಪಡುವದಾಗಿ ತಿಳಿಸಿದರು.

ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ವೈ. ಸೈಯದ್ ಅಹಮ್ಮದ್ ಹಾಗೂ ಉಪಾಧ್ಯಕ್ಷ ಡಾ. ಪಿ.ಸಿ. ಹಸೈನಾರ್ ಹಾಜಿ ಅವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಂ. ಸೈಯದ್ ಬಾವ ಹಾಗೂ ಉಪಾಧ್ಯಕ್ಷರನ್ನಾಗಿ ಪಿ.ಎಫ್. ಸಬಾಸ್ಟಿನ್ ಅವರನ್ನು ನೇಮಿಸಿರುವದಾಗಿ ಎಂ.ಎ. ಉಸ್ಮಾನ್ ಇದೇ ಸಂದರ್ಭ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಆಮಿನ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಹ್ಯಾರಿಸ್ ಎಡಪಾಲ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಅಪ್ರು ರವೀಂದ್ರ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಬೇಕಲ್ ರಮಾನಾಥ್, ಮಡಿಕೇರಿ ನಗರ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಯೋಜಕ ತೆನ್ನಿರ ಮೈನಾ, ಸೋನಿಯಾ ಗಾಂಧಿ ಬ್ರಿಗೇಡ್‍ನ ಜಿಲ್ಲಾಧ್ಯಕ್ಷ ಜಾನ್ಸನ್, ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸಂಪಾಜೆ, ಪ್ರಮುಖರಾದ ಮೈಸಿ ಕುಶಾಲನಗರ, ಜಫರುದ್ದೀನ್ ಮಡಿಕೇರಿ, ಖಾಲಿದ್ ಹಾಕತ್ತೂರು ಮತ್ತಿತರರು ಹಾಜರಿದ್ದರು.

ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್ ಅವರಿಗೆ ಕಾಂಗ್ರೆಸ್ ಧ್ವಜ ಹಸ್ತಾಂತರಿಸುವ ಮೂಲಕ ವೀಕ್ಷಕ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ನೂತನ ಅಧಿಕಾರ ನೀಡಿದರು. ಉಪಾಧ್ಯಕ್ಷ ಪಿ.ಎಫ್. ಸಬಾಸ್ಟಿನ್ ಸ್ವಾಗಿತಿಸಿ, ಪ್ರಧಾನ ಕಾರ್ಯದರ್ಶಿ ಕೆ.ಎಂ. ಸಯ್ಯಿದ್ ಬಾವ ವಂದಿಸಿದರು.