ಸುಂಟಿಕೊಪ್ಪ, ನ. 26: ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಒತ್ತು ನೀಡುವದರೊಂದಿಗೆ ಕ್ರೀಡೆಯಲ್ಲೂ ತೊಡಗಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಭಾರತೀಯ ರಿಪಬ್ಲಿಕ್ ಪಾರ್ಟಿ ಜಿಲ್ಲಾ ಅಧ್ಯಕ್ಷ ಕೆ.ಬಿ. ರಾಜು ಹೇಳಿದರು.

ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಸುಂಟಿಕೊಪ್ಪ ಅಂಬೇಡ್ಕರ್ ಸಂಘದ ವತಿಯಿಂದ ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ, ಸಂತಮೇರಿ ಆಂಗ್ಲ ಮಾಧ್ಯಮ ಕಾಲೇಜು, ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸರಕಾರಿ ಪದವಿ ಪೂರ್ವಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ ಅವರ ಪ್ರಯತ್ನದಿಂದ ಯುವ ಜನಸೇವಾ ಕ್ರೀಡಾ ಪ್ರಾಧಿಕಾರದಿಂದ ನೀಡಲಾದ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ಮಾದಕ ವಸ್ತು ಸೇರಿದಂತೆ ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಡಾ; ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸಿಕೊಂಡು ವಿದ್ಯಾದಾನ ಮಾಡಿದ ಗುರುಗಳಿಗೆ ಕಾಲೇಜಿಗೆ ಕೀರ್ತಿ ತರುವಂತ್ತಾಗಬೇಕು ಎಂದರು.

ಸುಂಟಿಕೊಪ್ಪ ನಾಡ ಕಚೇರಿ ಕಂದಾಯ ಪರಿವೀಕ್ಷಕ ಹೆಚ್.ಕೆ. ಶಿವಪ್ಪ ಮುಖ್ಯ ಅತಿಥಿಗಳಾಗಿ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆಗೆ ಸರಕಾರದಿಂದ ಎಲ್ಲಾ ರೀತಿಯ ಸೌಲಭ್ಯ ಸಿಗುತ್ತಿದೆ. ಮೊಬೈಲ್ ಬಳಕೆಯಿಂದ ದೂರವಿದ್ದು, ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಪಾಲ್ಗೊಂಡು ಆರೋಗ್ಯದತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ವೈ.ಎಂ. ಕರುಂಬಯ್ಯ ಕಾಲೇಜಿನ ಪ್ರಾಚಾರ್ಯ ಪಿ.ಎಸ್. ಜಾನ್ ಮಾತನಾಡಿದರು. ವೇದಿಕೆ ಯಲ್ಲಿ ಸುಂಟಿಕೊಪ್ಪ ಠಾಣಾಧಿಕಾರಿ ಬಿ. ತಿಮ್ಮಪ್ಪ, ಸುಂಟಿಕೊಪ್ಪ ಅಂಬೇಡ್ಕರ್ ಸಂಘದ ಅಧ್ಯಕ್ಷ ಎಂ.ಎಸ್. ರವಿ, ಟೈಲರ್ ಸಂಘದ ಅಧ್ಯಕ್ಷ ಶಿವಣ್ಣ, ದಿನೇಶ, ಗ್ರಾಮ ಪಂಚಾಯಿತಿ ಸದಸ್ಯ ಎ. ಶ್ರೀಧರ ಕುಮಾರ್, ಬಿಸಿಎಂ ವಸತಿ ನಿಲಯದ ಸಹಾಯಕ ಸತೀಶ, ಅಂಬೇಡ್ಕರ್ ಸಂಘದ ಗೌರವಾಧ್ಯಕ್ಷ ಹೆಚ್.ಎಂ. ಕಾವೇರಪ್ಪ, ಖಜಾಂಚಿ ಜಯಣ್ಣ, ಜನಾರ್ಧನ, ಸದಸ್ಯ ಶಿವಪ್ಪ, ರಾಜ, ಶಾಂತಗೇರಿ ರಾಜಣ್ಣ ಕಾಲೇಜಿನ ಉಪನ್ಯಾಸಕರಾದ ಎಸ್.ಹೆಚ್. ಈಶ, ಫಿಲಿಪ್‍ವಾಸ್, ಉಪನ್ಯಾಸಕಿಯರಾದ ಕೆ. ಕವಿತಾ ಭಕ್ತ್, ಪಿ. ಸೋಮಚಂದ್ರ, ಪದ್ಮಾವತಿ, ಜಯಶ್ರೀ, ಕಾವ್ಯ, ಕವಿತ, ಕನಕ, ವಿದ್ಯಾರ್ಥಿಗಳು ಹಾಜರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷೆ ಸೆಲ್ವಿ ಸ್ವಾಗತಿಸಿ ಕಾಲೇಜಿ ಉಪನ್ಯಾಸಕ ಬೆಳ್ಯಪ್ಪ ನಿರೂಪಿಸಿ, ವಂದಿಸಿದರು.