ಶನಿವಾರಸಂತೆ, ನ. 26: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದ ಮೇಲ್ವಿಚಾರಕಿ ಎಸ್.ಪಿ. ದಿವ್ಯಾ ಅವರಿಗೆ ಉತ್ತಮ ಸೇವೆಗಾಗಿ 2019-20 ರ ಸಾಲಿನ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ ಸಂದರ್ಭ ರಾಜ್ಯ ಸರಕಾರ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪುರಸ್ಕಾರ ಲಭಿಸಿದೆ. ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಾಗೂ ಸಿಬ್ಬಂದಿ ಸೇವಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ದಿವ್ಯಾ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.