ಚೆಟ್ಟಳ್ಳಿ, ನ. 26: ಮಕ್ಕಳ ಸಹಾಯವಾಣಿಯಿಂದ ಬಂದ ದೂರಿನನ್ವಯ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕರಾದ ಆರ್. ಶೀರಾಝ್ ಅಹ್ಮದ್ ಅವರ ನೇತೃತ್ವದಲ್ಲಿ, ವೀರಾಜಪೇಟೆ ತಾಲೂಕಿನ ಹುದಿಕೇರಿ ಹೋಬಳಿಯ ಬೆಳ್ಳೂರು ಗ್ರಾಮದಲ್ಲಿ ತೋಟದ ಕೆಲಸ ಮಾಡುತ್ತಿದ್ದ ಇಬ್ಬರು ಬಾಲಕರು ಹಾಗೂ ಓರ್ವ ಬಾಲಕಿಯನ್ನು ಬಿಡುಗಡೆಗೊಳಿಸಿ ತೋಟದ ಮಾಲೀಕರಿಗೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾಯ್ದೆಯಡಿ ನೋಟೀಸ್ ಜಾರಿ ಮಾಡಲಾಗಿದೆ.

ಈ ಸಂದರ್ಭ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ. ಮಹದೇವಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಮತಿ, ಪ್ರವೀಣ್ ಕುಮಾರ್ ಹಾಗೂ ಮಕ್ಕಳ ಸಹಾಯವಾಣಿ ಸದಸ್ಯರು ಇದ್ದರು.