ಮಡಿಕೇರಿ, ನ. 26: ಸಂವಿಧಾನ ಭಾರತ ದೇಶದ ಬಲಿಷ್ಠ ಶಕ್ತಿಯಾಗಿದ್ದು, ಅದನ್ನು ಸಂರಕ್ಷಿಸಬೇಕಾಗಿರುವದು ನಮ್ಮೆಲ್ಲರ ಕರ್ತವ್ಯ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‍ನ ವಕ್ತಾರ, ಸುಪ್ರೀಂ ಕೋರ್ಟ್ ವಕೀಲ ಪಾಲಚಂಡ ಬ್ರಿಜೇಶ್ ಕಾಳಪ್ಪ ಹೇಳಿದರು.ಜಿಲ್ಲಾ ಕಾಂಗ್ರೆಸ್ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ನಗರದ ಕೊಡವ ಸಮಾಜದಲ್ಲಿ ಆಯೋಜಿಸ ಲಾಗಿದ್ದ ಸಂವಿಧಾನ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಸಂವಿಧಾನದಲ್ಲಿ ಎಲ್ಲದಕ್ಕೂ ಉತ್ತರವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಂವಿಧಾನ ಎತ್ತಿ ಹಿಡಿದಿದೆ. ಆದರೆ, ಭಾರತೀಯ ಜನತಾ ಪಾರ್ಟಿ ಆರಂಭಿಸಿದ ಆಪರೇಷನ್ ಕಮಲ ಸಂಸ್ಕøತಿ ಯಿಂದಾಗಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗಿದೆ ಎಂದು ಬ್ರಿಜೇಶ್ ಆರೋಪಿಸಿದರು.ಇಡಿ, ಐಡಿ, ಸಿಬಿಐನಂತಹ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಬಿಜೆಪಿಗೊಂದು

(ಮೊದಲ ಪುಟದಿಂದ) ಕಾನೂನು, ಇತರ ಪಕ್ಷಗಳಿಗೊಂದು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನವನ್ನು ಉಳಿಸಿಕೊಳ್ಳುವದರ ಜೊತೆಗೆ ಅದರ ಸಂದೇಶವನ್ನು ಜನರಿಗೆ ತಲಪಿಸಿ ಜಾಗೃತಿ ಮೂಡಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕೆಂದು ಕರೆ ನೀಡಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಎ. ರಂಗಸ್ವಾಮಿ ಮಾತನಾಡಿ, ಸಂವಿಧಾನದ ವಿಚಾರದಲ್ಲಿ ಯುವ ಜನತೆಯ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿ ಹಾಗೂ ಅದರ ಅಂಗ ಸಂಸ್ಥೆಗಳು ಮಾಡುತ್ತಿದ್ದು, ಭಾರತೀಯರಿಗೆ ಎಲ್ಲಾ ರೀತಿಯ ಹಕ್ಕುಗಳನ್ನು ಒದಗಿಸಿಕೊಟ್ಟಂತಹ ಸಂವಿಧಾನವನ್ನು ಅವಮಾನಿಸುವ ಮನಸ್ಥಿತಿ ಸರಿಯಿಲ್ಲ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮಾತನಾಡಿ, ನಮ್ಮೆಲ್ಲರಿಗೂ ಬದುಕುವ ಹಕ್ಕನ್ನು ಕೊಟ್ಟಿರುವ ಸಂವಿಧಾನಕ್ಕೆ ದಿಗ್ಭಂದÀನ ವಿಧಿಸುವ ಕೆಲಸವನ್ನು ಮಾಡುವ ಮೂಲಕ ಸಂವಿಧಾನದ ಆಶಯಗಳನ್ನು ಬಿಜೆಪಿ ನಾಶಮಾಡುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕೆಲಸವಾಗಬೇಕಿದೆ ಎಂದರು. ನಗರಸಭಾ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್ ಮಾತನಾಡಿ, ಮತದಾನದ ಹಕ್ಕನ್ನು ಕಲ್ಪಿಸಿಕೊಟ್ಟಂತಹ ನಮ್ಮ ಸಂವಿಧಾನ ಈ ದೇಶದ ಆಸ್ತಿಯಾಗಿದ್ದು, ಯಾವದೇ ಜಾತಿಗೆ ಸೀಮಿತವಲ್ಲ ಎಂದು ಪ್ರತಿಪಾದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನೀರಾ ಮೈನಾ ಮಾತನಾಡಿ, ಸಂವಿಧಾನವನ್ನು ಪ್ರತಿಯೊಬ್ಬರು ಅರ್ಥೈಸಿಕೊಳ್ಳುವದರೊಂದಿಗೆ ಅದನ್ನು ಗೌರವಿಸುವಂತಾಗಬೇಕೆಂದರು.

ಕಾರ್ಯಕ್ರಮದಲ್ಲಿ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಗೂ ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಇವರುಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕೆಪಿಸಿಸಿ ಸದಸ್ಯೆ ತಾರಾ ಅಯ್ಯಮ್ಮ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ ಉಪಸ್ಥಿತರಿದ್ದರು.