ಸೋಮವಾರಪೇಟೆ, ನ. 25: ಕನ್ನಡ ಭಾಷೆಯನ್ನು ಮಾತನಾಡು ವದೇ ಗೌರವ. ಇಂತಹ ಭಾಷೆಯನ್ನು ಬೆಳೆಸಿದ ಕೀರ್ತಿ ಗ್ರಾಮೀಣ ಜನರಿಗೂ ಸಲ್ಲಬೇಕು ಎಂದು ವೀರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲ ರೋನಿ ರವಿಕುಮಾರ್ ಅಭಿಪ್ರಾಯಿಸಿದರು.

ಇಲ್ಲಿನ ಸಂತ ಜೋಸೆಫರ ವಿದ್ಯಾಸಂಸ್ಥೆ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಫಾದರ್ ರಾಯಪ್ಪ ಮಾತನಾಡಿ, ಕನ್ನಡವನ್ನು ಉಸಿರಾಗಿಸಿಕೊಳ್ಳುವದು ನಮ್ಮ ಕರ್ತವ್ಯ. ಕನ್ನಡ ಬಳಸಿದರೆ ಮಾತ್ರ ಕನ್ನಡವನ್ನು ಉಳಿಸಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾ ಡಿಸೋಜ, ಬೇಳೂರು ಗ್ರಾ.ಪಂ. ಸದಸ್ಯ ಯೋಗೇಂದ್ರ, ಕ.ರ.ವೇ. ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ಕಾಲೇಜು ಪ್ರಾಂಶುಪಾಲ ಅಂತೋಣಿ ರಾಜ್, ಮುಖ್ಯೋಪಾಧ್ಯಾಯ ಹ್ಯಾರಿ ಮೋರಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.