ಮಡಿಕೇರಿ, ನ.27 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ.30 ರಂದು ಜಿಲ್ಲೆಯ ಶಿಕ್ಷಕರಿಗೆ ‘ರಾಜ್ಯೋತ್ಸವ ಶಿಕ್ಷಕ ಪುರಸ್ಕಾರ-2019’ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ನ. 30 ರಂದು ಮಧ್ಯಾಹ್ನ 2 ಗಂಟೆಗೆ ಸ್ಥಳೀಯ ದೇವರಾಜು ಅರಸು ಭವನದಲ್ಲಿ ವೀರಾಜಪೇಟೆಯ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆಂದರು.

ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಭಾಗವಹಿಸಲಿದ್ದು, ಅತಿಥಿಗಳಾಗಿ ಕೊಡಗು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್‍ವಾಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಸ್.ಚೇತನ್ ಪಾಲ್ಗೊಳ್ಳಲಿದ್ದಾರೆ ಎಂದರು.

ಕಥಾ ಸಂಕಲನ ಅನಾವರಣ

ಕಾರ್ಯಕ್ರಮದಲ್ಲಿ ಲೇಖಕಿ ಕೆ.ಎಸ್. ನಳಿನಿ ಅವರು ರಚಿಸಿರುವ ತಾಮ್ರಕರ್ಣಿ ಕಥಾಸಂಕಲನವನ್ನು ಎಂಎಲ್‍ಸಿ ವೀಣಾ ಅಚ್ಚಯ್ಯ ಅವರು ಅನಾವರಣಗೊಳಿಸಲಿದ್ದಾರೆಂದು ತಿಳಿಸಿದರು.

ಶಿಕ್ಷಕರಿಗೆ ಪುರಸ್ಕಾರ ಕಾರ್ಯಕ್ರಮ ದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಾಧ್ಯಾಪಕಿ ಡಾ.ರೇಖಾ ವಸಂತ್, ಮಡಿಕೇರಿಯ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕಿ ಡಾ.ಕೋರನ ಸರಸ್ವತಿ, ವೀರಾಜಪೇಟೆಯ ಕಾವೇರಿ ಕಾಲೇಜು ಉಪನ್ಯಾಸಕಿ ಮುಲ್ಲೇಂಗಡ ರೇವತಿ ಪೂವಯ್ಯ, ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಜ್ಯೋತಿ, ಬಾಳೆಲೆ ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಅಶ್ವಿನ್ ಕುಮಾರ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದಿವಾಕರ್, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ತಿಲೋತ್ತಮೆ, ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಈಶ, ಹೆಬ್ಬಾಲೆ ಪ್ರೌಢಶಾಲೆ ಶಿಕ್ಷಕ ವೆಂಕಟನಾಯಕ್, ಕೊಡ್ಲಿಪೇಟೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಬ್ದುಲ್ ರಬ್ ಎಂ.ಎಸ್, ಮೂರ್ನಾಡು ಪ್ರೌಢಶಾಲಾ ಶಿಕ್ಷಕ ಪ್ರಶಾಂತ್, ಪೆÇನ್ನಂಪೇಟೆ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ನೂತನ್ ಕುಮಾರ್, ಕುಶಾಲನಗರ ಫಾತಿಮಾ ಪ್ರೌಢಶಾಲೆ ಶಿಕ್ಷಕಿ ಮಮತ ಕ್ರಾಸ್ತಾ, ನೆಲ್ಯಹುದಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆಯ ಶಿಕ್ಷಕÀ ಭಾರತಿ, ನ್ಯಾಯದಹಳ್ಳ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಕಿ ಜಿ.ಟಿ.ಕವಿತ, ನೆಲಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಪಿ.ಹೆಚ್.ಐಮದೆ, ಒಂಟಿಯಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಮಂಜುನಾಥ್, ಪೆರಾಜೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಮೋಹನ್ ಪೆರಾಜೆ, ಹಟ್ಟಿಹೊಳೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಶಾಂತಶೀಲ, ಎಲಿಯಂಗಾಡ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಸುಬ್ರಮಣ್ಯ ಅವರನ್ನು ಕಾರ್ಯಕ್ರಮದಲ್ಲಿ ಪುರಸ್ಕಾರ ನೀಡಿ ಗೌರವಿಸಲಾಗುವದು ಎಂದರು.

ವಿಶೇಷ ಸನ್ಮಾನ: ಇದೇ ಸಂದರ್ಭ ರಾಷ್ಟ್ರಪ್ರಶಸ್ತಿ ಪುರಸ್ಕøತ ಶಿಕ್ಷಕ ಸುರೇಶ್ ಮರಕಾಲ , ಕೂಡಿಗೆ ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಯ ಉಪನ್ಯಾಸಕ ಕೆ.ವಿ.ಸುರೇಶ್, ನಾಪೆÇೀಕ್ಲು ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಡಾ.ಅವನಿಜ ಸೋಮಯ್ಯ, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಭಾರತ ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಗುವದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್, ನಿರ್ದೇಶಕರಾದ ಕಿಗ್ಗಾಲು ಗಿರೀಶ್, ಕೋಡಿ ಚಂದ್ರಶೇಖರ್, ಕೆ.ಕೆ.ನಾಗರಾಜಶೆಟ್ಟಿ ಉಪಸ್ಥಿತರಿದ್ದರು.