ಸಿದ್ದಾಪುರ, ನ. 28: ಮಾಲ್ದಾರೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿ ಡಾ. ಶೃಂಗಶ್ರೀ ಚಾಲನೆ ನೀಡಿ, ಕ್ಷಯರೋಗದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಹಿರಿಯ ಆರೋಗ್ಯ ನಿರೀಕ್ಷಕ ಮಹದೇವಪ್ಪ, ಕಿರಿಯ ಆರೋಗ್ಯ ನಿರೀಕ್ಷಕ ಸುದರ್ಶನ್, ಅಂಗನವಾಡಿ ಶಿಕ್ಷಕರು, ಆಶಾ ಕಾರ್ಯಕರ್ತರು ಹಾಜರಿದ್ದರು.