ಮಡಿಕೇರಿ, ನ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಸ್ತ್ರೀಶಕ್ತಿ ಗುಂಪುಗಳ ಸದಸ್ಯರುಗಳಿಗೆ ಒಂದು ದಿನದ ಸಮಾವೇಶದ ಉದ್ಘಾಟನಾ ಸಮಾರಂಭವು ತಾ. 30 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಲಿದೆ.

ವಸತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವÀ ವಿ.ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪ್ಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್.ಬೋಜೆಗೌಡ, ಆಯನೂರು ಮಂಜುನಾಥ, ಸಂಸದ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷÀ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ, ತಾ.ಪಂ.ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ರೆಹನಾ ಫಿರೋಜ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ ಟಿ.ಎಸ್ ಇತರರು ಪಾಲ್ಗೊಳ್ಳಲಿದ್ದಾರೆ.