ಮಡಿಕೇರಿ, ನ. 27: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳು ತಾ. 30 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಲಿದೆ.
ವಿವಿಧ ಸ್ಪರ್ಧೆಗಳಲ್ಲಿ ನಡೆಸುª Àದರೊಂದಿಗೆ, ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪೆÇ್ರೀತ್ಸಾಹಿಸು ವದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ, ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆ ಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ 5 ರಿಂದ 8 ವರ್ಷ, 9 ರಿಂದ 12 ವರ್ಷ ಮತ್ತು 13 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಕನ್ನಡ ಗೀತೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ವಿಜೇತ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಗಳನ್ನು ಪ್ರಶಸ್ತಿ ಹಾಗೂ ನಗದು ಪುರಸ್ಕಾರ ನೀಡಲಾಗುವದು. ಈ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ತಾ. 29 ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿ ಹೆಸರು ನೋಂದಾಯಿಸಿ ಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ. 9611587016, 08272-298379ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.