ಮಡಿಕೇರಿ, ನ. 28: ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಹತ್ತಿರವಿರುವ ಯುದ್ಧ ಸ್ಮಾರಕದ ಆವರಣದಲ್ಲಿ ಡಿಸೆಂಬರ್ 7 ರಂದು ಬೆಳಿಗ್ಗೆ 10 ಗಂಟೆಗೆ ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಸಮಾರಂಭ ನಡೆಯಲಿದೆ.

ಕರ್ನಲ್(ನಿವೃತ್ತ) ಎನ್.ಸಿ. ನಂಜಪ್ಪ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲೆಯ ಮಾಜಿ ಯೋಧರು ಅವರ ಕುಟುಂಬದವರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕಿ ಗೀತಾ ತಿಳಿಸಿದ್ದಾರೆ.