ಚೆಟ್ಟಳ್ಳಿ, ನ. 28: ಕೇರಳ ಹಾಗೂ ಕರ್ನಾಟಕದಲ್ಲಿ ಕಳೆದ ಐವತ್ತು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷರಾಗಿರುವ ಸಿದ್ದಾಪುರದ ಪಿ.ಸಿ. ಹಸೈನಾರ್ ಹಾಜಿಯವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಸನ್ಮಾನಿಸಿ, ಗೌರವಿಸಿದರು
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಉಪಾಧ್ಯಕ್ಷ ರಂಗಸ್ವಾಮಿ, ಜಿಲ್ಲಾ ಸಂಯೋಜಕ ತೆನ್ನಿರ ಮೈನಾ, ನಗರಸಭಾ ಮಾಜಿ ಅಧ್ಯಕ್ಷ ನಂದಕುಮಾರ್, ಪ್ರಮುಖರಾದ ಅಪ್ರು ರವೀಂದ್ರ ಸೇರಿದಂತೆ ಮತ್ತಿತರರಿದ್ದರು.