ಮಡಿಕೇರಿ, ನ. 28: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ವೇತನದ ತಂತ್ರಾಂಶದಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ ತಿಳಿಸಿದ್ದಾರೆ.