ಮಡಿಕೇರಿ, ನ.28: ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ತಾ.29 ರಂದು (ಇಂದು) ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಡಿಕೇರಿಯ ಕೊಡವ ಸಮಾಜದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಆಯೋಜಿತವಾಗಿದೆ.
ಮಂಗಳೂರಿನ ಶಿಕ್ಷಣ ತಜ್ಞ ಡಾ.ನಾರಾಯಣ ಕಾಯರಕಟ್ಟೆ, ಮೈಸೂರಿನ ತೆರಿಗೆ ಇಲಾಖೆಯ ಉಪ ಆಯುಕ್ತ ರಮೇಶ್ ನರಸಯ್ಯ, ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಾನ್ ಟೆಲ್ಲಿಸ್ , ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಜಗನ್ನಾಥ್, ರೋಟರಿ ಕ್ಲಬ್ ಅಧ್ಯಕ್ಷ ರತನ್ ತಮ್ಮಯ್ಯ, ಕಾರ್ಯದರ್ಶಿ ಕೆ.ಸಿ.ಕಾರ್ಯಪ್ಪ, ನಿರ್ದೇಶಕ ಈಶ್ವರ ಭಟ್, ರೋಟರಿ ಜಿಲ್ಲೆ 3181 ನ ನಿಯೋಜಿತ ಗವರ್ನರ್ ರವೀಂದ್ರ ಭಟ್, ಕೂರ್ಗ್ ಎಜ್ಯುಕೇಶನ್ ಫಂಡ್ ನ ಟ್ರಸ್ಟಿ ಕೆ.ಕೆ.ತಿಮ್ಮಯ್ಯ ಪಾಲ್ಗೊಳ್ಳಲಿದ್ದಾರೆ. ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಶಾಲೆ, ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು, ಕೂರ್ಗ್ ಎಜ್ಯುಕೇಶನ್ ಫಂಡ್ ಮತ್ತು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಕಾರ್ಯಾಗಾರ ಆಯೋಜಿತವಾಗಿದೆ ಎಂದು ರೋಟರಿ ಕ್ಲಬ್ ಪ್ರಕಟಣೆ ತಿಳಿಸಿದೆ.